ದೇವೇಗೌಡರನ್ನು ಸರ್ವೋಚ್ಚ ನಾಯಕರಲ್ಲ ಎಂದು ನಾವು ಹೇಳಿಲ್ಲ
ಮುನಿರತ್ನ ವಿಚಾರವಾಗಿ ಒಕ್ಕಲಿಗ ನಾಯಕರ ನಿಯೋಗದ ಭೇಟಿಗೆ ನಾಳೆ ಸಂಜೆ ಸಮಯ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ದೇವೇಗೌಡರೇ ಒಕ್ಕಲಿಗರ ಸರ್ವೋಚ್ಚ ನಾಯಕ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ “ದೇಶದ ಪ್ರಧಾನಿಗಳಾಗಿದ್ದ ದೇವೇಗೌಡರನ್ನು ಸರ್ವೋಚ್ಚ ನಾಯಕರಲ್ಲ ಎಂದು ನಾವು ಹೇಳಿಲ್ಲ. ಅವರನ್ನು ನಾವು ನಾಯಕರಲ್ಲ ಎಂದು ಹೇಳಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
ದೇವೇಗೌಡರನ್ನು ದೇಶದ ಪ್ರಧಾನಿಗಳನ್ನಾಗಿ ಮಾಡಿದ್ದೇ ಕಾಂಗ್ರೆಸ್ ಪಕ್ಷ. ಬಿಜೆಪಿ ಅವರಿಗೆ ಸ್ಥಾನ ನೀಡಿಲ್ಲ. ಎಂದರು. ಡಿ.ಕೆ.ಸಹೋದರರು ಮುನಿರತ್ನ ವಿರುದ್ದ ಪಿತೂರಿ ಮಾಡುತ್ತಿದ್ದಾರೆ ಎನ್ನುವ ಬಿಜೆಪಿಯವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿ ಇಲ್ಲಿ ಡೈಲಾಗ್ ನಿರ್ದೇಶಕರು, ನಿರ್ಮಾಪಕರು ಯಾರಿದ್ದಾರೆ? ಎಲ್ಲರೂ ಅವರ ಜೊತೆಯಲ್ಲೇ ಇದ್ದಾರೆ” ಎಂದರು.