ಹವಾಮಾನ ವರದಿ ಮುಂಗಾರು ಕೈ ಕೊಟ್ಟ ಬೆನ್ನಲ್ಲೇ ಹಿಂಗಾರಿನ ಬಗ್ಗೆ ಆತಂಕ ಶುರುವಾಗಿದೆ
ಹವಾಮಾನ ವರದಿ weather news : ಕಾಸರಗೋಡು ಜಿಲ್ಲೆಯ ಸುತ್ತ ಮುತ್ತ ಸಂಜೆ, ರಾತ್ರಿ ಮೋಡದ ವಾತಾವರಣದ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಸಂಜೆ, ರಾತ್ರಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡದಲ್ಲಿ ಒಣ ಹವೆ ಇರಬಹುದು.
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಚಿಕ್ಕಮಗಳೂರು, ಕುದುರೆಮುಖ,ಶೃಂಗೇರಿ, ಕೊಪ್ಪ, ಆಗುಂಬೆ ಸುತ್ತಮುತ್ತಲಿನ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಹಾಸನ, ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರದ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
Read this : ಈರುಳ್ಳಿ ದರ Onion price ಏರಿಕೆಗೆ ಕಾರಣವೇನು ಗೊತ್ತಾ ?
ಬಂಗಾಳಕೊಲ್ಲಿಯ ಚಂಡಮಾರುತವು ಸಂಪೂರ್ಣ ಶಿಥಿಲಗೊಂಡಿದ್ದರಿಂದ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ. ಮುಂದಿನ ದಿನಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಲಕ್ಷಣಗಳಿವೆ.

Discussion about this post