ನವದೆಹಲಿ : ಭಾರತೀಯ ಸೇನೆಯ ಮಹಿಳಾ ಅಧಿಕಾರಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಪುಣೆಯ ಸೇನಾ ಗುಪ್ತಚರ ತರಬೇತಿ ಶಾಲೆ ( MINTS) ನಲ್ಲಿ ನಡೆದಿದ್ದು. ಮೃತರನ್ನು 43 ವರ್ಷದ ಲೆಫ್ಟಿನೆಂಟ್ ಕರ್ನಲ್ ಹುದ್ದೆಯ ಮಹಿಳೆ ಎಂದು ಗುರುತಿಸಲಾಗಿದೆ.
ಮೃತ ಮಹಿಳಾ ಅಧಿಕಾರಿ ಕೌಟುಂಬಿಕ ಸಮಸ್ಯೆಗಳಿಂದ ಜರ್ಜರಿತರಾಗಿದ್ದರು. ಜೊತೆಗೆ ವಿಚ್ಛೇದನಕ್ಕೂ ಅರ್ಜಿ ಸಲ್ಲಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ ಇದೊಂದು ಆತ್ಮಹತ್ಯೆ ಪ್ರಕರಣ ಎನ್ನಲಾಗಿದೆ. ಸಂಸ್ಥೆಯ ಸಿಬ್ಬಂದಿಗಳು ಇಂದು ಬೆಳಗ್ಗೆ ( ಅಕ್ಟೋಬರ್ 13) ರಂದು ಮೃತ ಅಧಿಕಾರಿಗೆ ಬೆಳಿಗ್ಗೆ ಟೀ ನೀಡಲು ಹೋಗಿದ್ದ ವೇಳೆ ಘಟನೆ ಬೆಳಕಿಗೆ ಬಂದಿದೆ.
Discussion about this post