ಮಂಗಳೂರು : ಕೊರೋನಾ ಸೋಂಕಿನ ಎರಡನೆ ಅಲೆ ಬೆಂಗಳೂರನ್ನು ಹಿಂಡಿ ಹಿಪ್ಪೆ ಮಾಡಿದೆ. ನಂತರ ದಿನಗಳಲ್ಲಿ ರಾಜಧಾನಿಯೊಂದಿಗೆ ನಿಕಟ ಸಂಪರ್ಕ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಗೂ ಇದು ಹರಡುವ ಸಾಧ್ಯತೆಗಳಿದೆ. ಈಗಾಗಲೇ ದಿನದಿಂದ ದಿನಕ್ಕೆ ಕರಾವಳಿ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಎರಡನೇ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳುತ್ತಿದ್ದಾರೆ. ಎಷ್ಟರ ಮಟ್ಟಿಗೆ ಅನ್ನುವುದು ಅಪಾಯ ಬಂದ ಮೇಲೆಯೇ ಗೊತ್ತಾಗಬೇಕಷ್ಟೆ.
ಈ ನಡುವೆ ಕೊರೋನಾ ಮುಂಜಾಗ್ರತಾ ಹಿನ್ನಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 35 ಮಹಿಳಾ ಸಿಬ್ಬಂದಿಗೆ ಎಪ್ರಿಲ್ 30ರವರೆಗೆ ವರ್ಕ್ ಫ್ರಮ್ ಹೋಮ್ ವ್ಯವಸ್ಥೆ ಕಲ್ಪಿಸಲಾಗಿದೆ.
ಕೆಲ ಮಹಿಳಾ ಸಿಬ್ಬಂದಿ ಗರ್ಭಿಣಿಯಾಗಿರುವ ಹಿನ್ನಲೆಯಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ ಎರಡು ವರ್ಷದೊಳಗಿನ ಮಕ್ಕಳಿರುವ ತಾಯಂದಿರಿಗೂ ಮನೆಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಮೊದಲ ಅಲೆಯ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ಆದ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಮಂಗಳೂರು ಪೊಲೀಸ್ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಎಷ್ಟು ಒಳ್ಳೆಯವರಲ್ವ ಕುಡ್ಲದ ಪೊಲೀಸರು.
Discussion about this post