ಗುರುಮಿಠಕಲ್ ತಾಲೂಕಿನ ಅರಕೇರಾ ಬಳಿ ಮಧ್ಯರಾತ್ರಿ ಈ ದುರ್ಘಟನೆ ಸಂಭವಿಸಿದೆ. (Yadgir accident) ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದಾರೆ.
ಯಾದಗಿರಿ : ವರಮಹಾಲಕ್ಷ್ಮಿ ಹಬ್ಬದಂದೇ ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ (Yadgir accident) ಸಂಭವಿಸಿದೆ. ಕ್ಯಾಂಟರ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದರಲ್ಲಿ ಒಂದು ವರ್ಷದ ಹೆಣ್ಣು ಮಗು ಕೂಡಾ ಸೇರಿದೆ.
ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಅರಕೇರಾ ಬಳಿ ಈ ಭೀಕರ ಅಪಘಾತ (Yadgir accident)ಸಂಭವಿಸಿದೆ. ಟ್ಯಾಂಕರ್ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ : Amit shah bommai : ಬೊಮ್ಮಾಯಿ ಜೀ ಹಮಾರೆ ಪಾರ್ಟಿ ಮೆ ಕ್ಯಾ ಚಲ್ ರಹಾ ಹೈ…?
ಮೃತಪಟ್ಟವರನ್ನು ರಾಯಚೂರು ಜಿಲ್ಲೆ ಲಿಂಗಸೂಗುರು ತಾಲೂಕಿನ ಹಟ್ಟಿ ಪಟ್ಟಣದವರು ಎಂದು ಗುರುತಿಸಲಾಗಿದೆ. ಇವರೆಲ್ಲರೂ ತೆಲಂಗಾಣದ ಕೊಡಂಗಲ್ ದರ್ಗಾಕ್ಕೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಗುರುಮಿಠಕಲ್ ಬಳಿ ಟ್ಯಾಂಕರ್ ಗೆ ಕಾರು ಡಿಕ್ಕಿಯಾಗಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಕ್ಯಾಂಟರ್ ನ ಚಾಲಕ ಮತ್ತು ಕ್ಲೀನರ್ ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಈ ನಡುವೆ ಕಾರಿನಲ್ಲಿದ್ದ ಓರ್ವ ಬಾಲಕನ ಸ್ಥೀತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗುರುಮಿಠಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಾಥಮಿಕ ಮಾಹಿತಿಗಳ ಪ್ರಕಾರ ಎರಡು ವಾಹನಗಳು ಕೂಡಾ ಅತೀವೇಗದಲ್ಲಿ ಸಂಚರಿಸುತ್ತಿತ್ತು ಎಂದು ಗೊತ್ತಾಗಿದೆ.
Discussion about this post