ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ರಾಜ್ಯದ ಅನೇಕ ಜಿಲ್ಲೆಗಳು ವಾರಗಳಿಂದ ಸೂರ್ಯನ ದರ್ಶನವನ್ನೇ ಮಾಡಿಲ್ಲ.
ಈ ನಡುವೆ ಶುಕ್ರವಾರ ಮತ್ತು ಶನಿವಾರ ಬೆಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರಿಸಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಬೆಂಗಳೂರಿನಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಬೆಂಗಳೂರು ನಗರ ವ್ಯಾಪ್ತಿಯ ಅಂಗನವಾಡಿ, ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಮತ್ತೊಂದು ಕಡೆ ಮಳೆ ಹೆಚ್ಚಿರುವ ಜಿಲ್ಲೆಗಳಲ್ಲಿ ರಜೆ ಘೋಷಿಸುವ ಅಧಿಕಾರವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗಳಿಗೆ ನೀಡಿದ್ದು, ಈ ಸಂಬಂಧ ಶಿಕ್ಷಣ ಇಲಾಖೆ ಆಯುಕ್ತ ವಿಶಾಲ್ ಸೂಚನೆ ನೀಡಿದ್ದಾರೆ. ಅದರಂತೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,ಕೋಲಾರ, ತುಮಕೂರು, ಹಾಸನ, ರಾಮನಗರದ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ತುಮಕೂರಿನಲ್ಲಿ ಮಾತ್ರ ನವೆಂಬರ್ 19 ಹಾಗೂ 20ರಂದು ರಜೆ ಘೋಷಿಸಲಾಗಿದ್ದು ನವೆಂಬರ್ 22 ರಂದು ಶಾಲೆಗೆ ಹೋಗಬೇಕಾಗಿದೆ.
ಇನ್ನು ಮಳೆಯ ಹಾನಿಯ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಸಭೆ ಕರೆದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಹಾರ ಕಾರ್ಯದ ಕುರಿತಂತೆ ಚರ್ಚೆ ನಡೆಸಲಿದ್ದಾರೆ.
Discussion about this post